ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ

ಸೊರಬ: ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ನಿಟ್ಟಿನಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪದವೀಧರರ ಸಮಸ್ಯೆಗಳ ಕುರಿತು ತಿಳಿದಿರುವ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.



































 
 

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮಾಡುವ ಮೂಲಕ ಸಾರ್ಥಕಗಳಿಸಿಕೊಳ್ಳಬೇಕು. ಜನಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ. ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡಬೇಕೆಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರಾಜ್ಯ ಪ್ರಕೋಷಗಳ ಸಂಯೋಜಕರಾದ ಎಸ್. ದತ್ತಾತ್ರಿ ಅವರು ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾ ಅಧ್ಯಕ್ಷ ಎಂ.ಡಿ. ಉಮೇಶ್, ತಾಲೂಕು ಮುಖಂಡರಾದ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ಮುಖಂಡರಾದ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top