ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಿವಾಸಿ, ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಣಿತ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ತನ್ನ ಮನೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಮನೆ ಪಾಠ ಹೇಳಿಕೊಡುತ್ತಿದ್ದರು.
ಮೃತರು ಪತ್ನಿ, ಪುತ್ರ, ನಾಲ್ವರು ಪುತ್ರಿಯರು, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.