ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕಾಣಿಯೂರು: ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದೋಳ್ಪಾಡಿ ಗ್ರಾಮದ ಅಜ್ಜಿನಡ್ಕ ನಿವಾಸಿ ಬಾಬು ಎಂಬವರ ಪುತ್ರ ವಸಂತ (40) ಮೃತಪಟ್ಟವರು.

ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಕೊಜಂಬೇಡಿ ಎಂಬಲ್ಲಿ ಮೇ 13 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ತನ್ನ ಮೋಟಾರ್ ಬೈಕ್ ನಲ್ಲಿ ಎಡಮಂಗಲಕ್ಕೆ ಹೋಗಿದ್ದ ವಸಂತರವರು ಅದೇ ಬೈಕಿನಲ್ಲಿ ವಾಪಾಸು ಮನೆಗೆ ಬರುತ್ತಿರುವಾಗ ಕೊಜಂಬೇಡಿ ಎಂಬಲ್ಲಿರುವ ಸೇತುವೆ ಬಳಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಕಾಣಿಯೂರು ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.





























 
 

ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top