ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.

ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top