ಪುತ್ತೂರು: ಒಂದು ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆಗ ಅವುಗಳಿಗೆಲ್ಲ ಯೋಚಿಸಿ ಪರಿಹಾರವನ್ನು ಕಂಡುಕೊಂಡು ಮುಂದುವರೆಯುವ ಶಕ್ತಿ ನಮ್ಮಲ್ಲಿರಬೇಕು. ಉದ್ಯಮ ಕ್ಷೇತ್ರಕ್ಕೆ ಕೌಶಲ್ಯವೆನ್ನುವುದು ಅತ್ಯಗತ್ಯ. ಬದಲಾವಣೆಗೆ ನಾವು ಹೊಂದಿಕೊಂಡು ನಮ್ಮ ಕೆಲಸದಲ್ಲಿ ಹೊಸತನವನ್ನು ಕಂಡು ಯಶಸ್ವಿಗೊಳ್ಳಬೇಕು ಅದಕ್ಕಾಗಿ ನಿರಂತರವಾದ ಕಲಿಕೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ ಎಂದು ಮಾಸ್ಟರ್ ಪ್ಲಾನರಿಯ ಆಕಾಶ್ ಎಸ್. ಕೆ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದ ವಾಣಿಜ್ಯ ವಿಭಾಗ, ಕಾಮರ್ಸ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ಏಕತ್ರ -2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶ ವಿಶ್ವದಲ್ಲಿ ಮೂರನೇ ಬಲಿಷ್ಟ ರಾಷ್ಟ್ರವಾಗಿ ಮುಂದುವರಿಯುತ್ತಿದೆ. ಇದಕ್ಕೆ ವಾಣಿಜ್ಯ ಕ್ಷೇತ್ರ ಬಹುದೊಡ್ಡ ಕೊಡುಗೆಯನ್ನು ನೀಡಿದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿಯುವುದನ್ನು ಪ್ರಾಯೋಗಿಕವಾಗಿ ಅನುಕರಣೆ ಮಾಡಬೇಕಾದರೆ ಶ್ರಮ ಪಡಬೇಕು ಎಂದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ. ಎನ್. ಶುಭ ಹಾರೈಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಉದ್ಯಮಿ ಆಕಾಶ್ ಎಸ್.ಕೆ., ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಭವ್ಯಶ್ರೀ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗಾಗಿ ಸುಮಾರು 15 ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವೇದಿಕೆಯಲ್ಲಿ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ. ಹೆಚ್. ಜಿ ಶ್ರೀಧರ್, ವಿಶೇಷ ಅಧಿಕಾರಿ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಬಿ., ವಿದ್ಯಾರ್ಥಿ ಸಂಯೋಜಕ ಪವನ್ ರಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಸ್ವಾತಿ ಪಿ.ಎನ್. ಸ್ವಾಗತಿಸಿ, ಭವ್ಯ ಹಿತೇಶ್ ಕುಮಾರ್ ವಂದಿಸಿದರು. ಕಾವ್ಯಶ್ರೀ ನಿರ್ವಹಿಸಿದರು.
ಏಕತ್ರ-2024 ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನು ದ್ವಿತೀಯ ಬಿಕಾಂ ಎ. ಮತ್ತು ರನ್ನರ್ ಅಪ್ ಪ್ರಶಸ್ತಿಯನ್ನು ಪ್ರಥಮ ಬಿಕಾಂ ಸಿ ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್‍ಆರ್‍ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹಾಗೂ ಕಾಲೇಜಿನ ಕಾವಲುಗಾರ ಸುಧಾಕರ ಅವರನ್ನು ಸನ್ಮಾನಿಸಲಾಯಿತು.