ಶಿವಮೊಗ್ಗ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಗತ್ಯೆ ಮಾಡಿಕೊಂಡ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಇಂದು ನಡೆದಿದೆ.
ಅಕ್ಷತಾ (30) ಆತ್ಮಹತ್ಯೆ ಮಾಡಿಕೊಂಡವರು.
ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಪ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.