ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಏಳು ನವಜಾತು ಶಿಶುಗಳು ಮೃತ್ಯು

ನವದೆಹಲಿ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಏಳು  ನವಜಾತ ಶಿಶುಗಳು ಮೃತಪಟ್ಟ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ  ನಡೆದಿದೆ.

ಈ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ರಾತ್ರಿ 11:32ರ ಸುಮಾರಿಗೆ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ನವಜಾತ ಶಿಶುಗಳು ಮೃತಪಟ್ಟಿವೆ. ಅಲ್ಲದೇ ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ. 5 ಮಕ್ಕಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿರುವ  ಅಗ್ನಿ ಶಾಮಕ ವಾಹನಗಳು ರಕ್ಷಣೆ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಕೆಲವರನ್ನು ರಕ್ಷಣೆ ಮಾಡಿ ಹೊರಕ್ಕೆ ತಂದಿದ್ದಾರೆ. ಆದ್ರೆ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top