ದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಎಎನ್ ಐಗೆ ತಿಳಿಸಿದ್ದಾರೆ.
ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.