ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಮಂಜುನಾಥ್ ಹಾಗೂ 4ನೇ ಆರೋಪಿ ಕೇಶವ ಪಡೀಲ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಹೈಕೋರ್ಟ್ ನ್ಯಾಯವಾದಿಗಳ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ದೂರುದಾರ ವಿಖ್ಯಾತ್ ಪರ ಹೈಕೋರ್ಟ್ ನ್ಯಾಯವಾದಿಗಳಾದ ರಾಜಶೇಖರ್ ಹಿಲ್ಯಾರ್ ಸುದೀರ್ಘ ವಾದಮಂಡಿಸಿದ್ದು, ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ.
ದೂರುದಾರರ ವಿಚಾರಣೆ ಮುಗಿಯುವ ತನಕ ಯಾವುದೇ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸದಂತೆ ಆದೇಶಿಸಿದೆ ಎಂದು ತಿಳಿದುಬಂದಿದೆ.
ದೂರುದಾರರ ಪರ ಸರ್ಕಾರಿ ಅಭಿಯೋಜಕರಾದ ಜಯಂತಿ ವಾದ ಮಂಡಿಸಿದ್ದರು.