ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ.
ಆಟೋ ರಿಕ್ಷಾ ಚಾಲಕ ಮನೋಜ್ ಎಂಬವರ ಪತ್ನಿ ಸಂಧ್ಯಾ (45) ಆತ್ಮಹತ್ಯೆ ಮಾಡಿಕೊಂಡವರು.
ಮನೋಜ್ ರಾತ್ರಿ ವೇಳ ರಿಕ್ಷಾದಲ್ಲಿ ಬಾಡಿಗೆ ಮಾಡುತ್ತಿದ್ದು ಬೆಳಗ್ಗೆ ಮನೆಗೆ ತೆರಳುತ್ತಿದ್ದರು. ಮನೆಯಲ್ಲಿ ಪತ್ನಿ ಮತ್ತು ಪುತ್ರ ಮಾತ್ರ ಇರುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದ ಮನೋಜ್ ಇಂದು ಬೆಳಿಗ್ಗೆ ಮನೆಗೆ ಹೋದಾಗ ಪತ್ನಿ ಮನೆಯ ಹಾಲ್ನ ಕಿಟಕಿಗೆ ನೇಣು ಬಿಗಿದು ಅಸ್ವಸ್ಥ ಸ್ಥಿತಿಯಲ್ಲಿದ್ದರು. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅದಾಗಲೇ ಸಂಧ್ಯಾ ಅವರು ಮೃತಪಟ್ಟಿದ್ದರು.