ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಲೀಡ್ ಬ್ಯಾಂಕ್‍ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ( ಎಸ್ ಸಿಡಿಸಿಸಿ) ಬ್ಯಾಂಕ್ 2023-24 ನೇ ಸಾಲಿನಲ್ಲಿ ಸಾಧಿಸಿದ ಸಮಗ್ರ ಸಾಧನೆಗೆ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದೆ.

2023-24 ನೇ ಸಾಲಿನಲ್ಲಿ ಠೇವಣಿ ಸಂಗ್ರಹ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆಗೈದಿರುವ ಬ್ಯಾಂಕ್, ಮುಖ್ಯವಾಗಿ ಕೃಷಿ ಸಾಲ ಮತ್ತು ಆದ್ಯತಾ ವಲಯ ಸಾಲ ನೀಡಿಕೆಯಲ್ಲೂ ಮಹತ್ತರ ಪ್ರಗತಿಯನ್ನು ಸಾಧಿಸಿದೆ.

ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಬ್ಯಾಂಕಿನ ಈ ಮಹತ್ತರ ಸಾಧನೆಯನ್ನು ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ಗುರುತಿಸಿದ್ದು, ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ನಡೆದ 2023-24 ನೇ 4 ನೇ ತ್ರೈಮಾಸಿಕ ಬ್ಲಾಕ್ ಲೆವೆಲ್ ಬ್ಯಾಂಕರ್ಸ್ ಕಮಿಟಿ ಸಭೆಯಲ್ಲಿ ಠೇವಣಿ ಸಂಗ್ರಹ ಮತ್ತು ಸಾಲ ನೀಡಿಕೆ ಅನುಪಾತದಲ್ಲಿ ತೃತೀಯ ಪ್ರಶಸ್ತಿ ನೀಡಿ ಗೌರವಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top