ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ ಎಂದು ಸಲಹೆ ನೀಡಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 20-22 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ‘ನಂಜಯ ಸರ್ಜಿ ಪರ ಒಳ್ಳೆಯ ಅಭಿಪ್ರಾಯವಿದೆ. ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆದ್ದೇ ಗೆಲ್ಲುತ್ತೇವೆ ಎಂದರು.