ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್.ಬಿ. ಅಧಿಸೂಚನೆ ಹೊರಡಿಸಿದ್ದಾರೆ.