ನಾಳೆ (ಮೇ 31): ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನವದೆಹಲಿ ಐಎಸ್‌ಟಿಇ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ ಮೇ 31 ನಾಳೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ.

ಇದೊಂದು ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ ಅತ್ಯುತ್ತಮ ಸಾಧನೆಗಳನ್ನು ಗುರುತಿಸುವ ಸ್ಪರ್ಧೆಯೂ ಇರುತ್ತದೆ. ರಾಜ್ಯಾದ್ಯಂತ ವಿವಿಧ ಇಂಜಿನಿಯರಿಂಗ್, ಎಂಬಿಎ ಮತ್ತು ಎಂಸಿಎ ವಿಭಾಗದ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ 9.30 ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಆಂಟೋನಿಯೋ ಧರ್ಮದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕಾಲೇಜು ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್.  ಅಧ್ಯಕ್ಷತೆ ವಹಿಸಲಿದ್ದಾರೆ.































 
 

ಸಂಜೆ 3.30 ನಡೆಯುವ ಸಮಾರೋಪ ಸಮಾರಂಭದಲ್ಲಿ ಮಣಿಪಾಲ್ ಡಾಟ್ ನೆಟ್ ಸಂಸ್ಥೆಯ ಸಂಶೋಧನೆ ಮತ್ತು ತರಬೇತಿ ವಿಭಾಗದ ನಿರ್ದೇಶಕ ಡಾ.ಯು.ಸಿ.ನಿರಂಜನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾಲೇಜು ಆಡಳಿತ ಮಂಡಳಿ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕರಾದ ಡಾ.ಜೀವಿತಾ.ಬಿ.ಕೆ, ಪ್ರೊ.ರಜನಿ ರೈ.ಬಿ. ಅವರ ಮುಂದಾಳುತ್ವದಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top