ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ.
ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.
ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಷೆ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.
ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್ಟಾಪ್ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.
ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲಾಕ್ಮೇಲ್ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೆಲವು ಸಂಘಟನೆಗಳು ಒತ್ತಾಯಿಸಿವೆ.