ವಿಧಾನಪರಿಷತ್ ಚುನಾವಣೆ ಶಾಂತಿಯುತ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪದವೀಧರರ ಕ್ಷೇತ್ರದಲ್ಲಿ ಶೇ.77.58, ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನ

ಪುತ್ತೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವ ಶಾಂತಿಯುತವಾಗಿ ನಡೆದಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.77.58 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನವಾಗಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪದವೀಧರರ ಕ್ಷೇತ್ರದಲ್ಲಿ ಒಟ್ಟು 2,520 ಮತದಾರರ ಪೈಕಿ 965 ಪುರುಷರು, 990 ಮಹಿಳೆಯರು ಸೇರಿದಂತೆ ಒಟ್ಟು 1955 ಮಂದಿ ಮತ ಚಲಾಯಿಸಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 804 ಮತದಾರರ ಪೈಕಿ 242 ಪುರುಷರು ಹಾಗೂ 379 ಮಹಿಳೆಯರು ಸೇರಿದಂತೆ ಒಟ್ಟು 621 ಮಂದಿ ಮತ ಚಲಾಯಸಿದ್ದಾರೆ.

ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ  ಮಿನಿ ಸಭಾಂಗಣದ ಮತಗಟ್ಟೆ ಸಂಖ್ಯೆ-22, ತಾಲೂಕು ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಕಟ್ಟಡದ ಮತಗಟ್ಟೆ ಸಂಖ್ಯೆ-22ಎ, ತಾಲೂಕು ಪಂಚಾಯತ್‌ನ ಸಾಮರ್ಥ್ಯ ಸೌಧದ ಮತಗಟ್ಟೆ ಸಂಖ್ಯೆ-22ಬಿ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ತೆರೆಯಲಾದ ಮತಗಟ್ಟೆಯಲ್ಲಿ ಮತದಾನ ನೆರವೇರಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top