ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್ಐಎ ಇಂದು ಬಂಧಿಸಿದೆ.
ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.