ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಕುರಿತು ಭೋಜೇಗೌಡ ಹಾಗೂ ವಿವೇಕಾನಂದ ಅವರ ಆಪ್ತ ವಲಯದಲ್ಲಿ ಹರ್ಷ ಮುಗಿಲುಮುಟ್ಟಿದೆ.
























