ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ.
ತೆಲುಗು ದೇಶ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ ಪಾಲುದಾರರು ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಗೆ ಅನುಮೋದಿಸಿದ ನಂತರ ನರೇಂದ್ರ ಮೋದಿ ಅವರನ್ನು ಶುಕ್ರವಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎಸ್ಟಿಎ ಸಭೆಯಲ್ಲಿ ಟಿಡಿಪಿಯ ಚಂದ್ರಬಾಬು ನಾಯ್ಡು, ಜನತಾದಳ- ಜಾತ್ಯತೀತ ನಾಯಕ ಎಚ್.ಡಿ.ಕುಮಾರಸ್ವಾಮಿ, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ- ಅಜಿತ್ ಪವಾರ್) ಮುಖ್ಯಸ್ಥ ಅಜಿತ್ ಪವಾರ್, ಲೋಕ ಜನಶಕ್ತಿ ಪಕ್ಷ (ಎಲ್ಲೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತಿತರರು ಭಾಗವಹಿಸಿದ್ದರು.