ಮೋದಿ ಪ್ರಮಾಣ ವಚನ ಜೂನ್ 9 ಕ್ಕೆ

 ದೆಹಲಿ : ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪ್ರಹ್ಲಾದ್ ಜೋಶಿ ಅವರು ಜೂನ್ 9ರಂದು ನರೇಂದ್ರ ಮೋದಿ ದೇಶದ ಮುಂದಿನ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖಚಿತಪಡಿಸಿದರು. ಸಮಾರಂಭವು ಜೂನ್ 9 ರಂದು ಸಂಜೆ 6 ಗಂಟೆಗೆ ನಡೆಯಲಿದೆ.

ಎನ್‌ಡಿಎ ಸಂಸದರಲ್ಲದೆ, ಮುಖ್ಯಮಂತ್ರಿಗಳು ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮೋದಿ ನಾಯಕತ್ವವನ್ನು ಬೆಂಬಲಿಸುವ ನಿರ್ಣಯವನ್ನು ಪ್ರಸ್ತಾಪಿಸಿದಾಗ ಮಿತ್ರಪಕ್ಷಗಳು ಮತ್ತು ಸಂಸದರು ಅದನ್ನು ಅನುಮೋದಿಸಿದರು.































 
 

ಎನ್‌ಡಿಎ 293 ಸಂಸದರನ್ನು ಹೊಂದಿದ್ದು, 543 ಸದಸ್ಯರ ಲೋಕಸಭೆಯಲ್ಲಿ ಬಹುಮತದ 272 ಕ್ಕಿಂತ ಹೆಚ್ಚು ಇದೆ. ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಹೊಸ ಸರ್ಕಾರದಲ್ಲಿ ತಮ್ಮ ಪ್ರಾತಿನಿಧ್ಯದ ಪಾಲಿಗೆ ಸೌಹಾರ್ದಯುತ ಸೂತ್ರವನ್ನು ರೂಪಿಸಲು ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top