ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ ಸೂಚನೆ ನೀಡಲಾಗಿದೆ.
4580 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11ರ ವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.