ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರಕಾರ ಇಂದು ಅಧಿಕಾರಕ್ಕೆ ಬರಲಿದ್ದು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.
ಸಂಜೆ 7.15ಕ್ಕೆ ಸಮಾರಂಭ ಶುರುವಾಗಲಿದ್ದು, ಜೂನ್ 5ರಂದು ನರೇಂದ್ರ ಮೋದಿ ರಾಷ್ಟಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು. ಬಳಿಕ ಅವರನ್ನು ನಿಯೋಜಿತ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು. ಬಳಿಕ ಅವರನ್ನು ನಿಯೋಜಿತ ಪ್ರಧಾನಿಯನ್ನಾಗಿ ನೇಮಿಸಲಾಗಿತ್ತು.
ಸಮಾರಂಭದಲ್ಲಿ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಅವರ ಬೆಂಬಲಿಗರು ಮೂರನೇ ಪ್ರಮಾಣವಚನವನ್ನು ಅಮೆರಿಕದ 22 ನಗರಗಳಲ್ಲಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ನ್ಯೂಯಾರ್ಕ್, ನ್ಯೂಜೆರ್ಸಿ ಸಿಟಿ, ವಾಷಿಂಗ್ಟನ್ ಡಿಸಿ, ಬೋಸ್ಟನ್, ಟ್ಯಾಂಪಾ, ಅಟ್ಲಾಂಟಾ, ಹೂಸ್ಟನ್, ಡಲ್ಲಾಸ್, ಶಿಕಾಗೊ, ಲಾಸ್ ಏಂಜಲೀಸ್ ಮತ್ತು ಸ್ಯಾನ್ ಫ್ರಾನ್ಸಿಸ್ಕೊ ಸೇರಿದಂತೆ ಹಲವು ನಗರಗಳಲ್ಲಿ ಸಂಭ್ರಮಾಚರಣೆ ನಡೆಯಲಿದೆ.