ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ಸ ಹಯೋಗದೊಂದಿಗೆ ನಡೆಯುವ ರಾಷ್ಟ್ರೀಯ ಮಟ್ಟದ “ಸೈನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್”ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಮೂರು ದಿನಗಳ ಕಾರ್ಯಾಗಾರಕ್ಕೆ ಆಡಿಟೋರಿಯಂನಲ್ಲಿ ಇಂದು ಚಾಲನೆ ನೀಡಲಾಯಿತು.  

ಶ್ರೀ. ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಬೆಂಗಳೂರು ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಬೆಂಗಳೂರು ಇದರ ಬೋರ್ಡ್ ಆಫ್ ಸ್ಟಡೀಸ್ ಆಯುರ್ವೇದ ವಿಭಾಗದ ಚೆಯರ್‌ಮನ್ ಡಾ. ಗಣೇಶ್ ಪುತ್ತೂರು ಮಾತನಾಡಿ, ರಿಸರ್ಚ್ ಪೇವರ್‌ಗಳ ಪ್ರಾಮುಖ್ಯತೆ, ಅಂತರಾಷ್ಟ್ರೀಯ ಮಟ್ಟದ ಲೇಖನ ಬರೆಯಲು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲು ಇಂತಹ ಕಾರ್ಯಗಾರಗಳು ಉಪಯುಕ್ತ ಹಾಗೂ ಬಹಳ ಪ್ರಯೋಜನಕಾರಿ ಎಂದು ಹೇಳಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ನೀಡುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಗಾರ ಪೂರಕವಾಗಿದೆ. ಮುಂದಿನ ದಿನಗಳಲ್ಲಿ ಅಲೋಪತಿ ವೈದ್ಯ ಪದ್ಧತಿಯವರಿಗೆ ಆಯುರ್ವೇದ ವೈದ್ಯ ಪದ್ಧತಿಯ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ. ಕಾರ್ಯಗಾರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಹೇಳಿದರು































 
 

ಮುಖ್ಯ ಅಥಿತಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಕಾರ್ಯದರ್ಶಿ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ ಇದರ ಸೆನೆಟ್ ಸದಸ್ಯ ಡಾ.ಐಶ್ವರ್ಯ ಕೆ.ಸಿ. ಮಾತನಾಡಿ, ಇಂತಹ ಕಾರ್ಯಗಾರಗಳು ನಮ್ಮ ವಿಚಾರಗಳನ್ನು ಹೆಚ್ಚು ಹೆಚ್ಚು ತಿಳಿಯಲು ಅನುಕೂಲ ಮಾಡಿಕೊಡುತ್ತದೆ, ಬೇರೆ ಬೇರೆ ಸ್ಥಳಗಳಿಂದ ಬಂದಂತಹ ನಾವು ನಮ್ಮೊಳಗೆ ವಿಚಾರಗಳನ್ನು ವಿನಿಮಯಮಾಡಿಕೊಂಡಾಗ ನಮ್ಮ ವಿಷಯಜ್ಞಾನ ವೃದ್ಧಿಸುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ಕಾರ್ಯಗಾರ ಸಂಘಟನಾ ಕಾರ್ಯದರ್ಶಿ ಡಾ.ಕವಿತಾ ಬಿ.ಯಂ. ಉಪಸ್ಥಿತರಿದ್ದರು.

ಕಾರ್ಯಗಾರದ ತರಬೇತುದಾರರಾದ ಡಾ. ಪ್ರತೀಭಾ ಸಿ.ಕೆ., ಡಾ.ಆಶಾ ಎಸ್.ಎ., ಡಾ. ನಳೀನಾ ಸರಸ್ವತಿ, ದೇಶದ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರು, ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಡಾ. ಕವಿತಾ ಬಿ. ಯಂ. ವಂದಿಸಿದರು. ಡಾ. ಹರ್ಷಿತಾ ಎಂ. ಮತ್ತು ಡಾ. ನಿಲೋಫರ್ ತಹನಿ ಆರ್. ಎ., ಕಾರ್ಯಕ್ರಮ ನಿರೂಪಿಸಿದರು. ಡಾಕ್ಟರ್ ಗೌರಿ ಪಾರ್ವತಿ ಮತ್ತು ಡಾಕ್ಟರ್ ಸೂರ್ಯಪ್ರಿಯ ಪ್ರಾರ್ಥಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top