ಪ್ರಾಣಿಗಳ ಹತ್ಯೆ ನಿಷೇಧ | ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳ ವತಿಯಿಂದ ನಗರ ಠಾಣೆಗೆ ಮನವಿ

ಪುತ್ತೂರು : ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲಿಗೆ ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ ನಿಷೇಧವಿರುತ್ತದೆ.
ಸುಪ್ರೀಂ ಕೋರ್ಟ್ WP 309:2003 ದಿನಾಂಕ 30.01.2014 ರ ತೀರ್ಪಿನ ಆದೇಶ ದಿನಾಂಕ 06.01.2009 WP 1443 / 2008 ಹಾಗೂ ಕಾಲ ಕಾಲಕ್ಕೆ ಸರಕಾರ ವಿವಿಧ ಆದೇಶಗಳಂತೆ ರಾಜ್ಯದಲ್ಲಿ ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ಟಾಗಿ ತಡೆಯಲು ನಾವು ಮನವಿ ಮಾಡುತ್ತಿದ್ದೇವೆ.

ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ಬಕ್ರೀದ್ ವರೆಗೂ ನಾಕಾಬಂದಿ ಹಾಕಬೇಕು. ಬಕ್ರೀದ್ ವರೆಗೆ ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು. ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಹಿಂದೆ ನಡೆದಲೆಲ್ಲ ನಿಗಾ ಇಡುತ್ತಾ, ಪ್ರಾರ್ಥನಾ ಮಂದಿರಗಲ್ಲಿಯೂ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಲು ಸೂಚಿಸಬೇಕು.
ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಮೊದಲೇ ಪೊಲೀಸರು ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲ ಕಾರ್ಯಗಳಲ್ಲಿ ಕಾನೂನುಭದ್ಧವಾಗಿ ತಮಗೆ ಸಹಕರಿಸಲು ನಮ್ಮ ಕಾರ್ಯಕರ್ತರು ಸದಾ ಸಿದ್ದರಿದ್ದಾರೆ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಪುತ್ತೂರು ನಗರ ಪೋಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ, ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಉಪಾಧ್ಯಕ್ಷ ಜಗದೀಶ್ ನಿರ್ಪಾಜೆ, ಪ್ರಖಂಡ ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ, ಪುತ್ತೂರು ಗ್ರಾಮಾಂತರ ಪ್ರಖಂಡ ಬಜರಂಗದಳ ಸಹ ಸಂಯೋಜಕ್ ಅನಿಲ್ ಇರ್ದೆ, ಆಖಾಡ ಪ್ರಮುಖ್ ದಿನೇಶ್ ತಿಂಗಳಾಡಿ, ಪುತ್ತೂರು ನಗರ ಪ್ರಖಂಡ ಸಹ ಸುರಕ್ಷಾ ಪ್ರಮುಖ್ ಜೀವನ್ ಬಲ್ನಾಡ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top