ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟ್ರೀಯತೆ ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಹಿರಿಯ ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ದೀಪ ಪ್ರದಾನ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ.ಮಾಧವ ಭಟ್ ಎಚ್ ಮಾತನಾಡಿ, ಕಾಲೇಜಿನಲ್ಲಿ ಕಳೆದ ಕ್ಷಣಗಳು ಅವಿಸ್ಮರಣೀಯ. ಈ ವಿದ್ಯಾ ಸಂಸ್ಥೆಯ ರಾಯಭಾರಿಗಳಾಗಿ ವಿದ್ಯಾರ್ಥಿಗಳು ಹೊರಹೊಮ್ಮುವಂತಹ ಸಂದರ್ಭದಲ್ಲಿ ತಾವು ಶಿಕ್ಷಣ ಪಡೆದ ಸಂಸ್ಥೆಯನ್ನು ಮರೆಯಬಾರದು. ಈ ವಿದ್ಯಾಸಂಸ್ಥೆ ನಿಮ್ಮ ಮುಂದಿನ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ ವತ್ಸಲಾ ರಾಜ್ಞಿ ಪ್ರೊ ಎಂ.ಎನ್ ಚೆಟ್ಟಿಯಾರ್, ವಿಶ್ರಾಂತ ಪ್ರಾಚಾರ್ಯ ಡಾ. ಮಾಧವ ಭಟ್ ಎಚ್, ಹಿರಿಯ ವಿದ್ಯಾರ್ಥಿಗಳಾದ ಬೆಂಗಳೂರಿನ ಅಕ್ಸೆಂಚರ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಪುರುಷೋತ್ತಮ ಕಡಂಬು, ಕೇರಳ ಸರಕಾರದ ವಿಶ್ರಾಂತ ಡೆಪ್ಯೂಟಿ ಸೂಪರಿಂಟೆಂಡ್ ಆಫ್ ಪೊಲೀಸ್ ಶ್ರೀರಾಮ ತಲೆಂಗಳ ಮತ್ತು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕಲಾವಿಭಾಗದಲ್ಲಿ 5 ನೇ ರ್ಯಾಂಕ್ ಪಡೆದ ಶ್ರೀಜನಿ ಎಸ್.ಆರ್, 6ನೇ ರ್ಯಾಂಕ್ ಪಡೆದ ವೀರೇಶ, ವಿಜ್ಞಾನ ವಿಭಾಗದಲ್ಲಿ 5ನೇ ರ್ಯಾಂಕ್ ಪಡೆದ ಶರಧಿ ಎಸ್. ಕೆ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ದಿವ್ಯಶ್ರೀ ವಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.































 
 

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ .ಪಿ, ಕಾರ್ಯದರ್ಶಿ ಡಾ.ಮನಮೋಹನ ಎಂ., ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು. ಪರೀಕ್ಷಾಂಗ ಕುಲಸಚಿವ ಡಾ.ಹೆಚ್.ಜಿ ಶ್ರೀಧರ್ ಸ್ವಾಗತಿಸಿ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನಾಯ್ಕ್ ಬಿ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ಣಿಮಾ ಯು.ಎಸ್., ಶೈನಿತ ಆರ್.ಎಸ್ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top