ಕುವೈತ್‍ ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 35 ಮಂದಿ ಸಜೀವ ದಹನ

ಕುವೈತ್‍ ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಭಾರತೀಯರು ಸೇರಿದಂತೆ 35 ಮಂದಿ ಸಜೀವ ದಹನವಾದ ಘಟನೆ ನಡೆದಿದೆ.

ದಕ್ಷಿಣ ಕುವೈತ್‌ನ ಮಂಗಾಫ್ ನಗರದ ಕಟ್ಟಡದಲ್ಲಿ ಅವಘಡ ಸಂಭವಿಸಿದ್ದು, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ.

ಕುವೈತ್ ಆರೋಗ್ಯ ಸಚಿವಾಲಯ ನೀಡಿದ ಹೇಳಿಕೆ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.





























 
 

ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.

ಅಡುಗೆ ಮನೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್‍ ಮೆಂಟಿನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ ಎನ್ನಲಾಗಿದೆ.

ಕೆ.ಜಿ.ಅಬ್ರಹಾಂ ಎಂಬವರ ಮಾಲಿಕತ್ವದ ಈ ಕಟ್ಟಡದಲ್ಲಿ ಸುಮಾರು 195 ಮಂದಿ ವಾಸಿಸುತ್ತಿದ್ದರು. ಬೆಂಕಿಯನ್ನು ಹತೋಟಿಗೆ ತರಲಾಗಿದ್ದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಬಗ್ಗೆ ವರದಿಯಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top