ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ದರ್ಶನ್ ಗೆಳತಿ ಬಗ್ಗೆ ರೇಣುಕಾ ಸ್ವಾಮಿ ಅಶ್ಲೀಲ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ. ಹಾಗೆ ಮಾಡಿದ್ದರೆ ಈ ಬಗ್ಗೆ ದೂರು ನೀಡಬಹುದಿತ್ತು. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ದೂರು ನೀಡಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರು ಎಂದಿದ್ದಾರೆ.