ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಆನೆಯೊಂದು ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ ಘಟನೆ ಇಂದು ಮುಂಜಾನೆ ನಡೆದಿದೆ.
ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗ ಆನೆಯನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ.
ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್.
ಕಳೆದ ಎರಡು ತಿಂಗಳಿನಿಂದ ಈ ಸಲಗ ಚಾರ್ಮಾಡಿಯಲ್ಲಿ ಸುತ್ತಾಡುತ್ತಿದ್ದು, ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.