ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ್ದು, ಇದು ಇತಿಹಾಸದಲ್ಲೇ ಪ್ರಥಮ ಬಾರಿಯಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದರು. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನು ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ ಎನ್ನಲಾಗಿದೆ.
ಠಾಣೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜೂ.13 ರಿಂದ 17 ರ ತನಕ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇದೀಗ ಸಣ್ಣಪುಟ್ಟ ಕೇಸ್ ಗಳು ಅಂತ ಬರುವವರನ್ನು ಪೊಲೀಸರು ಗೇಟ್ ಬಳಿಯೇ ತಡೆದು ಅಲ್ಲಿಂದ ವಾಪಸ್ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.