ಗೋಹತ್ಯೆ ಖಂಡಿಸಿ ವಿಹಿಂಪ, ಬಜರಂಗದಳ ವತಿಯಿಂದ ಪೊಲೀಸ್ ಠಾಣೆ, ಗೋ ಆಸ್ಪತ್ರೆ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಪೊಲೀಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಇಂದು ಮನವಿ ಮಾಡಲಾಯಿತು.

ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧದ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.

ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ ಮತ್ತಿತರರು ಮನವಿ ನೀಡುವ ಸಂದರ್ಭ ಹಾಜರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top