ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜೂ.13 ರಂದು ಕಾಲೇಜಿನ ದಿ.ಶ್ರೀ ಮಂಜುನಾಥ ಶೆಟ್ಟಿ ಮಲಾರು ಬೀಡು ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಸವಣೂರು ಜಿನಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಆರಿಗ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಲೇಜಿನ ಅಭಿವೃದ್ಧಿ ಮತ್ತು ಚಟುವಟಿಕೆಗಳ ಕುರಿತು ಅವಲೋಕನ ಮಾಡಿದರು.
ವಿಠಲ ಗೌಡ ಅಗಳಿ, ವೆಂಕಟೇಶ್ ಭಟ್ ವಿ., ಶೀನಪ್ಪ ಗೌಡ ಬೈತಡ್ಕ, ಪ್ರವೀಣ್ ಕುಂಟ್ಯಾಣ, ಸೀತಾರಾಮ ಗೌಡ ಮುಂಡಾಳ, ದೇವಿಪ್ರಸಾದ್ ಸಂಜಕು, ನಾಣಿಲ ಹಿರಿಯ ಪ್ರಾಥಮಿಕ ಶಾಲಾ ಸಮಿತಿ ಅಧ್ಯಕ್ಷ ವಸಂತ ದಲ್ಲಾರಿ, ಸದಸ್ಯರು, ಹೆತ್ತವರು ಉಪಸ್ಥಿತರಿದ್ದರು.
ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶ್ರೇಣಿ ಮತ್ತು ಶೇ.90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಬಹುಮಾನ ನೀಡಲಾಯಿತು.
ಪ್ರಾಚಾರ್ಯ ಸ್ವಾಮಿ ಎಸ್. ಸ್ವಾಗತಿಸಿದರು. ಪ್ರಾಚಾರ್ಯ ಡಾ.ಶಂಕರ ಭಟ್ ಅಧ್ಯಕ್ಷತೆ ವಹಿಸಿ ವರದಿ ವಾಚಿಸಿದರು. ಸಾಂಸ್ಕೃತಿಕ ಸಂಚಾಲಕಿ ದೀಪ್ತಿ ಎ.ಸಿ. ವಂದಿಸಿದರು. ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.