ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ !

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್‌ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್ ದುಬಾರಿಯಾಗುತ್ತಿದೆ.

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ.































 
 

ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top