ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ | 5 ಲಕ್ಷ ಪರಿಹಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನಟ ದರ್ಶನ್ ನನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ತೀವ್ರ ಒತ್ತಡ ಹೆಚ್ಚಾಗಿದ್ದು, ಈ ಬೆನ್ನಲ್ಲೇ ನಟ ದರ್ಶನ್‌ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು(ಜೂನ್.15) ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ 5 ಲಕ್ಷ ಪರಿಹಾರದ ಚೆಕ್ ನೀಡಿದ್ದಾರೆ.

ಜೊತೆಗೆ ಶಾಸಕರೊಬ್ಬರು 2 ಲಕ್ಷ ಪರಿಹಾರ ನೀಡಿದ್ದಾರೆ. ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದಾರೆ.

ಈ ಬಗ್ಗೆ ಹತ್ಯೆಯಾದ ರೇಣುಕಾ ಸ್ವಾಮಿ ಮನೆಯವರ ಸಂಪೂರ್ಣ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದು ವರದಿ ತಿಳಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top