ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ.
ಬೊಲೆರೋ ಹಾಗೂ ಆಲ್ಟೋ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ.
ಮೃತಪಟ್ಟವರನ್ನು ಸೋಮವಾರ ಪೇಟೆ ಮೂಲದ ಲೋಕೇಶ್ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.
ಬೊಲೆರೋ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.