ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸೆಸ್‍ ಜಾಸ್ತಿ ಮಾಡಿ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‍ ನ್ನು ಹೆಚ್ಚಳ ಮಾಡುವ ಆದೇಶಕ್ಕೆ ಸಹಿತ ಹಾಕುವ ಮೂಲಕ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ 13 ಸಾವಿರ ಕೋಟಿ ಕೊರತೆ ಸೃಷ್ಟಿಯಾಗಿರುವುದರಿಂದ ರಾಜ್ಯ ಸರಕಾರ ಧೂಮಕೇತುವಿನ ರೀತಿ ಜನಸಾಮಾನ್ಯರ ಮೇಲೆ ಎರಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಕೇಂದ್ರ ಸರಕಾರ ವಿರುದ್ಧ ಇಂಧನ ದರ ಇಳಿಕೆಗಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಸೆಸ್ ಇಳಿಕೆ ಮಾಡಿದರೂ ಕರ್ನಾಟಕ ಸರಕಾರ ಮಾತ್ರ ತೆಪ್ಪಗಿತ್ತು. ಬಜೆಟ್ ಗೆ ಮುನ್ನವೇ ಪೆಟ್ರೋಲಿಯಂ ಉತ್ಪನಗಳ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ.



































 
 

ವೈದ್ಯಶಿಕ್ಷಣ ಸೇರಿದಂತೆ ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಿದ್ದ ಸರಕಾರ ಪೆಟ್ರೋಲಿಗೆ ಬೆಂಕಿ ಹಚ್ಚಿದೆ. ಸರಕಾರ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯ. ಭವಿಷ್ಯದಲ್ಲಿ ಕಾಂಗ್ರೆಸ್ ಸರಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top