ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ರಾಜ್ಯ ಸರಕಾರದ ವಿರುದ್ಧ ಖಂಡನೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆಯುತ್ತಿದೆ.
ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ನಾಯಕರಾದ ಪ್ರತಾಪಸಿಂಹ ನಾಯಕ್, ಕಿಶೋರ್ ಬೊಟ್ಯಾಡಿ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ ಸಹಿತ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.