ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಕೊಡಗು ವಿರಾಜಪೇಟೆ ಮೂಲದ ವಸಂತ ಮೃತಪಟ್ಟವರೆಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಕಾಂತಮಂಗಲ ಶಾಲಾ ಬಳಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ತನಿಖೆ ಆರಂಭಿಸಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಮೃತಪಟ್ಟ ವ್ಯಕ್ತಿ ವಸಂತ ಎಂದು ಗುರುತಿಸಲಾಗಿದ್ದು ಈತ ಕುದ್ರೆಪಾಯದಿಂದ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.