ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನ ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ರಕ್ಷಿತ್ ಪುತ್ತಿಲ, ಸಾರಿಕಾ ಸುರೇಶ್ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top