ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ವಿಧಿವಿಧಾನಗಳು ಮತ್ತು ಪ್ರಬಂಧ ರಚನೆ ಕಾರ್ಯಗಾರ

ಪುತ್ತೂರು: ಸಂಶೋಧನ ವರದಿ ತಯಾರಿಸುವುದರಲ್ಲಿ ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಸಹಜ. ಇದನ್ನು ಮಾರ್ಗದರ್ಶಕರೊಂದಿಗೆ ಸಮಾಲೋಚನೆ ಮಾಡಿ ಪರಿಹರಿಸಿಕೊಳ್ಳಬೇಕು. ತಳಮಟ್ಟದ ಅಧ್ಯಯನ, ವಿಷಯಗಳ ಆಸಕ್ತಿ ನಮ್ಮ ಅಧ್ಯಯನಗಳನ್ನು ಬಲಗೊಳಿಸುತ್ತದೆ ಎಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕ ಡಾ. ರಾಬಿನ್ ಮನೋಹರ್ ಶಿಂದೆ ತಿಳಿಸಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಡೆದ ಸಂಶೋಧನೆಯ ವಿಧಿ ವಿಧಾನಗಳು ಮತ್ತು ಸಂಶೋಧನಾ ಪ್ರಬಂಧವನ್ನು ರೂಪಿಸುವುದರ ಬಗ್ಗೆ ನಡೆದ ಪ್ರಾತ್ಯಕ್ಷಿಕ ಕಾರ್ಯಾಗಾರದಲ್ಲಿ ಮಾತನಾಡಿದರು.

ಸ್ನಾತಕೋತ್ತರ ವಿಭಾಗದ ನಿರ್ದೇಶಕ, ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಶ್ರೀಧರ್ ಹೆಚ್ ಜಿ. ಮಾತನಾಡಿ, ಸಂಶೋಧನೆಯ ಅಧ್ಯಯನದಲ್ಲಿ ಕಾಲಕಾಲಕ್ಕೆ ಮಾರ್ಪಾಡುಗಳಾಗಿವೆ. ಸಂಶೋಧನೆಯ ವಸ್ತುವನ್ನು ಆರಿಸಿಕೊಳ್ಳುವಾಗ ಮಾಹಿತಿಯ ಲಭ್ಯತೆಯ ಬಗೆಗೆ ಎಚ್ಚರಿಕೆ ವಹಿಸಿಕೊಳ್ಳುವ ಅಗತ್ಯತೆ ಇದೆ. ಬರವಣಿಗೆಯ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಅಧ್ಯಯನ ಮತ್ತು ಸಮಾಲೋಚನೆಯ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು. ಅಡಿಟಿಪ್ಪಣಿ, ಪರಾಮರ್ಶನ ಗ್ರಂಥಗಳನ್ನು ಸೂಚಿಸುವಲ್ಲಿ ನಿರ್ದಿಷ್ಟ ಕ್ರಮವನ್ನು ಅನುಸರಿಸುವ ಅಗತ್ಯತೆ ಇದೆ ಎಂದರು.































 
 

ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ, ಸ್ನಾತಕೋತ್ತರ ವಿಭಾಗದ ಡೀನ್ ವಿಜಯ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ದೀಪಶ್ರೀ ಸ್ವಾಗತಿಸಿ, ರೋಹಿತ್ ವಂದಿಸಿದರು ತೇಜಸ್ವಿ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top