ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ದಿ.ಎಂ.ಬಿ.ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಮಾಜಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ, ಶ್ರೀ ಛಲವಾದಿ ನಾರಾಯಣಸ್ವಾಮಿ, ಶ್ರೀ ಪ್ರತಾಪಸಿಂಹ ನಾಯಕ್, ಶ್ರೀ ಕೇಶವ್ ಪ್ರಸಾದ್, ಡಾ. ತಳವಾರ್ ಸಾಬಣ್ಣ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
