ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಬೇತಿಯನ್ನು ಆರಂಭಗೊಳಿಸಲಾಯಿತು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,
ನಮ್ಮ ಮನಸ್ಸು ಮತ್ತು ದೇಹದ ಸಂಯೋಗವೇ ಯೋಗ. ಇದರ ಭಾಗವಾದ ಸುದರ್ಶನ ಕ್ರಿಯಾ ಯೋಗವನ್ನು ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡುವಂತೆ ತರಬೇತಿ ನೀಡಲಾಗುತ್ತದೆ. ಇದರ ಅಭ್ಯಾಸದಿಂದ ಒಬ್ಬ ವ್ಯಕ್ತಿಯು ಸನಾತನ ಧರ್ಮದ ನಿಜವಾದ ಅನುಯಾಯಿಯಾಗುತ್ತಾನೆ ಎಂದು ಹೇಳಿದ ಅವರು, ನಕರಾತ್ಮಕ ಭಾವನೆಗಳಾದ ಸಿಟ್ಟು ಗೊಂದಲಗಳು ಮನುಷ್ಯನ ಉಸಿರಾಟದ ವೇಗವನ್ನು ಹೆಚ್ಚಿಸುತ್ತವೆ. ಧನಾತ್ಮಕ ಭಾವನೆಗಳು ಉಸಿರಾಟವನ್ನು ನಿಧಾನವಾಗಿಸುತ್ತವೆ. ನಿಧಾನವಾದ ಉಸಿರಾಟದ ಕ್ರಮವನ್ನು ಆಳವಡಿಸಿಕೊಂಡ ಮನುಷ್ಯನ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ, ಯೋಗ ಶಿಕ್ಷಕಿ ಶರಾವತಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧೃತಿ ಭಟ್ ಪ್ರಾರ್ಥಿಸಿದರು. ಪ್ರಾಚಾರ್ಯೆ ಸುಚಿತ್ರ ಪ್ರಭು ಸ್ವಾಗತಿಸಿ, ಉಪಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ. ಎಸ್. ವಂದಿಸಿದರು. ಉಪನ್ಯಾಸಕ ವಿಷ್ಣು ಪ್ರದೀಪ್ ನಿರೂಪಿಸಿದರು.