ಪುತ್ತೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಜೂ.20 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಸಭೆ ನಡೆದ ಬಳಿಕ ಖಾಸಗಿ ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಯಲ್ಲಿ ತರಳಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮನವಿ ಸಲ್ಲಿಸಲಾಗುವುದು.
ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.