ಮಂಗಳೂರು: ಎನ್‌ಎಚ್‌ಎಐನ ಯೋಜನಾ ನಿರ್ದೇಶಕರೊಂದಿಗೆ ಚರ್ಚೆ ನಡೆಸಿ ಮಳೆ ಬಿರುಸುಗೊಳ್ಳುವ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳ ಬಗ್ಗೆ ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದರು.

ಮಂಗಳೂರಿನಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕಾಮಗಾರಿ ಹಂತದಲ್ಲಿರುವ ಎಲ್ಲಾ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ರೂಪುರೇಷೆಗಳನ್ನು ಹಾಕಿಕೊಂಡು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮವಹಿಸಲಿದ್ದೇನೆ ಎಂಬ ಭರವಸೆಯನ್ನು ನೀಡಿದರು.