ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್.

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಏರ್ಪಡಿಸಿದ ಸರಳ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್, ಕೋಸ್ಟಲ್ ಹೋಮ್ ಮಾಲಕ ಸಂದೇಶ್ ರೈ, ಅರೋಗ್ಯ ಸಹಾಯಕಿ ವೀಣಾ, ಆಶಾ ಕಾರ್ಯಕರ್ತೆ ಚಂದ್ರಾವತಿ ಉಪಸ್ಥಿತರಿದ್ದರು.



































 
 

ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿ ಸೂರ್ಯ ನಮಸ್ಕಾರ, ಪ್ರಾಣಯಾಮ ಹಾಗೂ ಯೋಗಾಸನಗಳನ್ನು ನಡೆಸಿಕೊಟ್ಟರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top