ಹೊಟೇಲ್ ಸಪ್ಲಯರ್ ನಾಪತ್ತೆ : ಪ್ರಕರಣ ದಾಖಲು

ಪುತ್ತೂರು: ಇಲ್ಲಿಯ ಹೊಟೇಲ್ ವೊಂದರ ಸಪ್ಲಯರ್ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.

ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ಬೊಳುವಾರಿನ ಹೊಟೇಲ್ ಒಂದರಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ಪ ಯಾನೆ ಶಿವಣ್ಣ (45) ನಾಪತ್ತೆಯಾದವರು.



































 
 

ಪತ್ನಿ ಗೀತಾ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನನ್ನ ಗಂಡ ಶಿವಪ್ಪ ಯಾನೆ ಶಿವಣ್ಣ ಅವರು ಬೊಳುವಾರಿನ ಹೊಟೇಲ್‌ನಲ್ಲಿ ಸಪ್ಲಯರ್ ಆಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದರು. ಜೂ.10ರಂದು ಬೆಳಿಗ್ಗೆ ಅವರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಹಿಂದಿರುಗಿಲ್ಲ. ಆದರೆ ಈ ಹಿಂದೆಯೂ ಅದೇ ರೀತಿ ಮನೆಯಿಂದ ಹೋದವರು ವಾರ ಕಳೆದು ಬಂದಿದ್ದರು. ಹಾಗಾಗಿ ಅದೇ ರೀತಿ ಅವರು ಹಿಂದಿರುಗಿ ಬರಬಹುದು ಎಂದು ತಿಳಿದುಕೊಂಡಿದ್ದೆ. ಆದರೆ ಈ ಬಾರಿ ಅವರು ಮನೆಯಿಂದ ಹೋಗಿ 10 ದಿನ ಆದರೂ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top