ಸುಳ್ಯ: ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ನಡೆಸಲಾಯಿತು.

ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು.

ಮರಳಿ ಬಂದ ಕುಟುಂಬಗಳಿಗೆ, ಬಟ್ಟೆಗಳು, ದಿನಸಿ ಸಾಮಗ್ರಿಗಳು, ವಿವಿಧ ದೇವರುಗಳ ಫೋಟೋಗಳು, ಮತ್ತು ಇತರ ಗೃಹ ಉಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು.