ಮುಳ್ಳಯ್ಯನಗಿರಿ ಚಾರಣ  : ಮಳೆಯ ಹಿನ್ನೆಲೆ ನಿಷೇಧ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ  ಹಾಗೂ ಎತ್ತಿನಭುಜದಲ್ಲಿ  ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಮುಂಗಾರು ಸಮಯದಲ್ಲಿ ಚಿಕ್ಕಮಗಳೂರು ಸೌಂದರ್ಯ ದುಪ್ಪಟ್ಟಾಗಿರುತ್ತದೆ. ನೆರೆ ಜಿಲ್ಲೆ ರಾಜ್ಯದ  ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಾಕೃತಿಕ ಸೌಂದರ್ಯದಿಂದ ಸಮೃದ್ಧಿಯಾಗಿರುವ ಕಾಫಿನಾಡಿನ ಸೊಬಗಿಗೆ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.





























 
 

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top