ಪುತ್ತೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಶಾಲೆ ಹಾಗೂ ರಸ್ತೆ ಬದಿಗಳಲ್ಲಿ ಶಾಲೆಗಳಲ್ಲಿ ಗಿಡ ನೆಡುವ ಮೂಲಕ ತಾಲೂಕು ಮಟ್ಟದ ವನಮಹೋತ್ಸವವನ್ನು ಇಂದು ಆಚರಿಸಲಾಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾರಾಡಿ ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯಾಧಿಕಾರಿ ಬಿ.ಎಂ.ಕಿರಣ್, ಸಿಬ್ಬಂದಿಗಳು, ಟ್ರಸ್ಟ್ ಪ್ರಮುಖರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡರು.
ಬಳಿಕ ಉಪ್ಪಿನಂಗಡಿ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡಲಾಯಿತು.