ರಾಜ್ಯಾದ್ಯಂತ ಚಿಕನ್, ಫಿಶ್‍ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ ಗೆ ಕೃತಕ ಬಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿತ್ತು. ಇದೀಗ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ.

ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.



































 
 

ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರೆಸುವಿಕೆಯನ್ನ ನಿಷೇಧಿಸಿ, ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ. ಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top