ಸುಬ್ರಹ್ಮಣ್ಯ: ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಅವರ ಕುಟುಂಬ ಸಹಿತವಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.
ದೇವಳಯದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿರುವ ಡಿ ಕೆ ಶಿವಕುಮಾರ್ ಕುಟುಂಬ ಸಂಜೆ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉಪ ಮುಖ್ಯ ಮಂತ್ರಿಗಳನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಸ್ವಾಗತ ಕೋರಿದರು.